ನಮಸ್ತೆ ಬಂಧುಗಳೇ.. ಕರ್ನಾಟಕ ರಾಜ್ಯ ಸರ್ಕಾರದ ಹೋರಾಟಕ್ಕೆ ಕೊನೆಗೂ ಜಯಕ್ಕೆ ಜಯ ಸಿಕ್ಕಿದೆ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ , ಕರ್ನಾಟಕದ ರೈತರಿಗೆ 3,455 ಕೋಟಿ ರೂ,ಗಳ ಬರ ಪರಿಹಾರ ಬಿಡುಗಡೆ ಮಾಡಿದೆ.
(ಏ.27): ರಾಜ್ಯ ಸರ್ಕಾರದ ಹೋರಾಟಕ್ಕೆ ಜಯಕ್ಕೆ ಜಯ ಸಿಕ್ಕಿದೆ, ಹೌದು ಬಂಧುಗಳೇ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,455 ಕೋಟಿ ರೂಪಾಯಿಗಳ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಸಮಯಕ್ಕೆ ಸರಿಯಾಗಿ ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡದೆ ತಡೆ ಹಿಡಿದಿದ್ದ ಕೇಂದ್ರ ಸರ್ಕಾರದ ಕ್ರಮಕ್ಕೆ ನಮ್ಮ ಕರ್ನಾಟಕ ಸರ್ಕಾರವು ಖಂಡನೆ ಮಾಡಿ, ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಈ ಹಿನ್ನೆಲೆಯಲ್ಲಿ ಈಗ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಲಾಗಿದೆ.
3 ಎಕರೆ ಜಮೀನಿನಲ್ಲಿ 12 ಲಕ್ಷ ಆದಾಯ ಮಾದರಿಯಾದ ರೈತ ! ಬರದಲ್ಲೂ ಬಂಪರ್ ಬೆಳೆ ! ಹೇಗೆ?
ನಮ್ಮ One life ಕನ್ನಡ ವೆಬ್ಸೈಟ್ನಲ್ಲಿ ಸರ್ಕಾರದ ಹೊಸ ಯೋಜನೆ, ಉದ್ಯೋಗ, ಆರೋಗ್ಯ ಹಾಗೂ ನಾಗರೀಕರಿಗೆ ಅಗತ್ಯವಾದ ಸುದ್ದಿಗಳನ್ನು ನೀಡಲಾಗುತ್ತಿದೆ, ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿ ಉಚಿತವಾಗಿ ಮಾಹಿತಿಯನ್ನು ನೀವು ಪ್ರತಿದಿನವೂ ಪಡೆದುಕೊಳ್ಳಬಹುದು.
ರಾಜ್ಯದಲ್ಲಿನ ಬರ ಕುರಿತು ಪರಿಶೀಲನೆ ನಡೆಸಿದ ನಮ್ಮ ರಾಜ್ಯ ಸರ್ಕಾರ 18,174 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಆದರೆ ಸದ್ಯ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,455 ಕೋಟಿ ರೂಪಾಯಿಗಳನ್ನು ಮಾತ್ರ ಸದ್ಯಕ್ಕೆ ಬಿಡುಗಡೆ ಮಾಡಿದೆ.
ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ನಡುವೆ ಸಂಘರ್ಷ ತಾರಕಕ್ಕೇರಿತ್ತು , ರಾಜ್ಯಕ್ಕೆ ಬರ ಪರಿಹಾರ ನೀಡುವಲ್ಲಿ ಮೋದಿ ಸರ್ಕಾರ ತಾರತಮ್ಯ ನೀತಿ ಅನುಸರಣೆ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸೇರಿ ಡಿಸಿಎಂ, ಮಂತ್ರಿಗಳು ಸೇರಿ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು, ಕಾರ್ಯಕರ್ತರು ಧರಣಿ ನಡೆಸಿದ್ದರು. ಬರ ಪರಿಹಾರ ಸಿಗದಿದ್ದಾಗ ಕರ್ನಾಟಕ ರಾಜ್ಯ ಸರ್ಕಾರ ದೆಹಲಿಯಲ್ಲಿ ಕೂಡ ಪ್ರತಿಭಟನೆ ಮಾಡಿತ್ತು.
ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿ ಈಗಾಗಲೇ 7 ತಿಂಗಳಾಗಿತ್ತು. 18,172 ಕೋಟಿ ರು.ಗಳನ್ನು NDRF ನಿಂದ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಒತ್ತಾಯವನ್ನು ಕೂಡ ಮಾಡಿತ್ತು. ಕೇಂದ್ರ ಸರ್ಕಾರದಿಂದ ಸರಿಯಾಗಿ ಯಾವುದೇ ಪ್ರತಿಕ್ರಿಯೆ ಬರದಿದ್ದಾಗ ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ದಾವೇ ಯನ್ನು ಸಹ ಹೂಡಿ ಪ್ರಶ್ನೆಯನ್ನು ಮಾಡಿತ್ತು .
ದೇಶದ ಒಕ್ಕೂಟ ವ್ಯವಸ್ಥೆಯಲ್ಲಿನ ಸಾಂವಿಧಾನಿಕ ಬದ್ಧವಾಗಿ ಕರ್ನಾಟಕಕ್ಕೆ ಬಿಡುಗಡೆ ಮಾಡಬೇಕಿದ್ದ ಬರ ಪರಿಹಾರವನ್ನು ಬಿಡುಗಡೆ ಮಾಡದೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ತೀವ್ರ ಬರದಿಂದ ಕಂಗೆಟ್ಟಿರುವ ಕರ್ನಾಟಕದ ರೈತರೆಲ್ಲ ಕಂಗಾಲಾಗಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಬೇಕು ಎಂದು ಕೋರಿ ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಸುಪ್ರೀಂ ನ್ಯಾಯಾಲಯವು “ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿಧಿಯಿಂದ” ಕರ್ನಾಟಕಕ್ಕೆ ತಕ್ಷಣ ಹಣ ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿತ್ತು . ಕೇಂದ್ರ ಸರ್ಕಾರವು ಕೂಡ ಮುಂದಿನ ಸೋಮವಾರದೊಳಗೆ ಪರಿಹಾರ ಸಂಬಂಧ ಕ್ರಮ ಕೈಗೊಳ್ಳುತ್ತೇವೆ ಎಂದು ಸುಪ್ರೀಂ ಕೋರ್ಟ್ ನಲ್ಲಿ ಭರವಸೆಯನ್ನು ನೀಡಿತ್ತು. ಇದರ ನಡುವೆ ಕೇಂದ್ರ ಸರ್ಕಾರವು 3,454 ಕೋಟಿ ರೂ,ಗಳನ್ನು ಕರ್ನಾಟಕಕ್ಕೆ ಬಿಡುಗಡೆ ಮಾಡಿದೆ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಉಚಿತ ಮಾಹಿತಿ ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಯಾವ ರೈತರಿಗೆ ಬರ ಪರಿಹಾರ ಹಣ ಜಮೆ ಆಗಿದೆ ! Bara Parihara
ಸದ್ಯಕ್ಕೆ ಉತ್ತರ ಕರ್ನಾಟಕದ ಬಹು ಭಾಗ ರೈತರಿಗೆ ಬರ ಪರಿಹಾರ ಹಣವು ಸಂದಾಯವಾಗಿದ್ದು, ತಾಂತ್ರಿಕವಾಗಿ ಯಾವುದೇ ಸಮಸ್ಯೆ ಇಲ್ಲದ ದಕ್ಷಿಣ ಕರ್ನಾಟಕದ ಎಲ್ಲ ಜಿಲ್ಲೆಯ ರೈತರಿಗೂ ಬರ ಪರಿಹಾರದ ಹಣ ಬಿಡುಗಡೆಯಾಗಿದೆ ಎಂದು ತಿಳಿದುಬಂದಿದೆ. ಪರಿಶೀಲನೆ ಮಾಡಲು ಇಲ್ಲಿ ಕ್ಲಿಕ್ ಮಾಡಿ ಎಲ್ಲ ಮಾಹಿತಿಯನ್ನು ನೀಡಿ ಬರ ಪರಿಹಾರ ಜಮೆಯನ್ನು ಚೆಕ್ ಮಾಡಿ https://parihara.karnataka.gov.in/PariharaPayment/
ಮಹಿಳೆಯರು ಉಚಿತ ಹೊಲಿಗೆ ಯಂತ್ರ ಪಡೆಯಲು ಈಗಲೇ ಅರ್ಜಿ ಸಲ್ಲಿಸಿ..! free sewing machine scheme
ಕರ್ನಾಟಕದ ಜೊತೆಗೆ ಕೇರಳ ಮತ್ತು ತಮಿಳುನಾಡು ರಾಜ್ಯಗಳು ಕೂಡ ತಮ್ಮ ರಾಜ್ಯದ ಬರ ಪರಿಹಾರಕ್ಕಾಗಿ ಸುಪ್ರೀಂ ಮೆಟ್ಟಲೇರಿತ್ತು. ಪ್ರಕೃತಿ ವಿಕೋಪದಲ್ಲಾದ ಪರಿಹಾರವಾಗಿ ಕೇಂದ್ರ ಸರ್ಕಾರವು ತಮಿಳುನಾಡಿಗೆ 276 ಕೋಟಿ ಬಿಡುಗಡೆ ಮಾಡಿದೆ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಉಚಿತ ಮಾಹಿತಿ ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.