ನಮಸ್ತೆ ಬಂಧುಗಳೇ… ನಮ್ಮ ಮಂಡ್ಯದಲ್ಲೂ ಶೇ.60 ಕನ್ನಡ ಕಡ್ಡಾಯ, ಇಲ್ಲವಾದಲ್ಲಿ ಅಂಗಡಿಗಳ ಲೈಸೆನ್ಸ್ ರದ್ದು: ಮಂಡ್ಯ ಡಿಸಿ ಡಾ:ಕುಮಾರ ಎಚ್ಚರಿಕೆ ನೀಡಿದ್ದಾರೆ, ಈಗಾಗಲೇ ಕರ್ನಾಟಕ ಸರ್ಕಾರ ಬೆಂಗಳೂರಿನಲ್ಲಿ ಕಾರ್ಯಚರಣೆ ಮಾಡುವ ಕಂಪನಿ, ಅಂಗಡಿ ಮಳಿಗೆಗಳು, ಖಾಸಗಿ ಕಂಪನಿಗಳು, ವಾಣಿಜ್ಯಾತ್ಮಕ ಕೇಂದ್ರಗಳು ತಮ್ಮ ಕಟ್ಟಡಗಳ ಮೇಲೆ ಶೇಕಡ 60ರಷ್ಟು ಕನ್ನಡ ಪದ ಬಳಕೆಯನ್ನು ಮಾಡಬೇಕೆಂದು ವಿಧೇಯಕವನ್ನು ಚರ್ಚಿಸಿ ವಿಧಾನಸಭೆಯಲ್ಲಿ ಶಾಸನವನ್ನು ತಂದು ರಾಜ್ಯಪಾಲರ ಅಂಕಿತವನ್ನು ಪಡೆದು ಬೆಂಗಳೂರಿನಲ್ಲಿಡೆ ಜಾರಿ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಸಮಗ್ರ ಮಾಹಿತಿಗಾಗಿ ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಸರ್ಕಾರದ ಆದೇಶದ ಪ್ರಕಾರ ಸ್ಥಳೀಯ ಪ್ರಾಧಿಕಾರ, ನಗರ ಸಭೆ, ಪುರಸಭೆ, ಗ್ರಾಮ ಮಟ್ಟದ ಪಂಚಾಯಿತಿಗಳಿಂದ ಅನುಮತಿ ಪಡೆದು ಮಂಡ್ಯ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ ಕಟ್ಟಡ, ಕೈಗಾರಿಕೆ ಕಟ್ಟಡ, ಆಸ್ಪತ್ರೆ,, ಅಂಗಡಿಗಳು, ಖಾಸಗಿ ಕಂಪನಿಗಳು, ಹೋಟೆಲ್ ಗಳು,ಶಾಲೆಗಳು ಅನಾವರಣಗೊಳಿಸುವ ತಮ್ಮ ನಾಮಫಲಕಗಳಲ್ಲಿ ಶೇ60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ ಮಾಡಬೇಕೆಂದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ಇದನ್ನೂ ಓದಿ : ರೇಷನ್ ಕಾರ್ಡಿನ ಅನ್ನಭಾಗ್ಯ ಹಣ ಬ್ಯಾಂಕ್ ಖಾತೆಗೆ ಜಮೆ ಆಗಿದೆಯೇ? ನಿಮ್ಮ ಮೊಬೈಲ್ ನಲ್ಲಿ ಈ ರೀತಿ ಸುಲಭವಾಗಿ ಪರೀಕ್ಷಿಸಿಕೊಳ್ಳಿ! ಲಿಂಕ್ ನೋಡಿ ! AnnaBagya
ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ – 2022 ನ್ನು ಕಾಯಿದೆ ಸಮರ್ಪಕವಾಗಿ ಜಾರಿಗೊಳಿಸುವ ಸಂಬಂಧ ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ- 2024 ರನ್ವಯ ಮಂಡ್ಯ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪರವಾನಗಿ ರದ್ದು (ಲೈಸೆನ್ಸ್ ರದ್ದು)
ಪರವಾನಗಿ ರದ್ದು ನಾಮಫಲಕದಲ್ಲಿ ಕನ್ನಡ ಭಾಷೆ ಶೇ 60 ರಷ್ಟು ಇರಬೇಕು ಎಂದು ಈಗಾಗಲೇ ಆದೇಶ ಹೊರಡಿಸಲಾಗಿದೆ. ಇದನ್ನು ಸರಿಯಾಗಿ ಅನುಸರಿಸದಿದ್ದಲ್ಲಿ ಸ್ಥಳೀಯ ಸಂಸ್ಥೆಗಳು ಅಥವಾ ಅನುಷ್ಠಾನ ಪ್ರಾಧಿಕಾರ ಮಳಿಗೆಗಳ ಪರವಾನಗಿ ರದ್ದು ಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಾರ್ಖಾನೆಗಳಿಗೆ ಸಂಬಂಧಿಸಿದಂತೆ ಕೈಗಾರಿಕಾ ಇಲಾಖೆ, ಅಂಗಡಿ ಮುಂಗಟ್ಟಿಗೆ ವಾಣಿಜ್ಯ ಮಳಿಗೆಗಳಿಗೆ ಸ್ಥಳೀಯ ಸಂಸ್ಥೆಗಳು, ಹಾಗೂ ಖಾಸಗಿ ಶಾಲಾ ಕಾಲೇಜು-ಶಿಕ್ಷಣ ಇಲಾಖೆ ಹೀಗೆ ವಿವಿಧ ಇಲಾಖೆಗಳು ಸೇರಿ 7 ದಿನದೊಳಗಾಗಿ ಸ್ವಯಂ ಪರಿಶೀಲನೆ ನಡೆಸಿ ಅವುಗಳು ಅಳವಡಿಸಿರುವ ನಾಮಪಲಕಗಳಲ್ಲಿ ಶೇ 60 ಕನ್ನಡ ಭಾಷೆ ಬಳಸಿರುವ ಬಗ್ಗೆ ಶೀಘ್ರವಾಗಿ ವರದಿ ನೀಡಬೇಕು. ಶೇ 60 ಇಲ್ಲದಿದ್ದಲ್ಲಿ ಅವರಿಗೆ ದಂಡ ವಿಧಿಸಬೇಕು ಹೀಗೆ ವಿಧಿಸಿರುವ ದಂಡ ಅಥವಾ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಗ್ರ ವರದಿ ನೀಡಬೇಕು ಎಂದರು.ಮಂಡ್ಯ ಜಿಲ್ಲೆಯ ಸಮಗ್ರ ಮಾಹಿತಿಗಾಗಿ ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ : ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ, ಆಸಕ್ತರು ಇಂದೇ ಅರ್ಜಿ ಸಲ್ಲಿಸಿ ವೇತನ 29,200.!
ಈ ಅಧಿನಿಯಮದಲ್ಲಿ ಮೊದಲನೇಯ ಬಾರಿ ಅಪರಾಧಕ್ಕೆ ರೂ 5000/-. 2 ನೇ ಬಾರಿಗೆ ರೂ 10,000/-, 3 ನೇಯ ಬಾರಿಗೆ ರೂ 20,000/-, ದಂಡ ಮತ್ತು 4 ನೇ ಬಾರಿಗೆ ದಂಡದೊಂದಿಗೆ ಪರವಾನಗಿ (ಲೈಸೆನ್ಸ್) ರದ್ದು ಪಡಿಸಲು ಅವಕಾಶವಿದೆ. ಅಧಿಕಾರಿಗಳು ಪರಿಣಾಮಕಾರಿಯಾಗಿ ಕ್ರಮ ಕೈಗೊಳ್ಳಬೇಕು. ಕನ್ನಡ ಭಾಷಾ ನಾಮಪಲಕ ಶೇ 60 ರಷ್ಟು ಅಳವಡಿಕೆ ಯಾಗಿಲ್ಲ ಎಂದು ಸಾರ್ವಜನಿಕರಿಂದ ದೂರುಗಳು ಬಂದಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು.
ಕನ್ನಡ ಭಾಷೆಯು ಕರ್ನಾಟಕ ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಬೇಕೆಂದು ಸರ್ಕಾರ ತನ್ನ ಆದೇಶವನ್ನು ಹೊರಡಿಸಿದೆ. ಇದರ ದಾರಿಯಾಗಿ ಕನ್ನಡ ಭಾಷೆಯನ್ನು ಸಮಗ್ರವಾಗಿ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಎಲ್ಲಾ ನಾಮಫಲಕಗಳು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ಹಾಗೂ ಶೇ. 40% ಇತರೆ ಭಾಷೆಗಳಲ್ಲಿ ಇರಬಹುದು ಎಂದು ತಿಳಿಸಿದರು.
ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿ (AC) ಡಾ. ಎಚ್. ಎಲ್. ನಾಗರಾಜು ಅವರು ಪ್ರತಿ 3 ತಿಂಗಳಿಗೊಮ್ಮೆ ಅನುಷ್ಠಾನದ ಬಗ್ಗೆ ವರದಿ ಮಾಡಿ ನೋಟಿಸ್ ಜಾರಿ ಮಾಡಿರುವ ಹಾಗೂ ದಂಡ ವಿಧಿಸಿರುವ ಬಗ್ಗೆ ವರದಿಯನ್ನು ಸಲ್ಲಿಸಬೇಕು ಎಂದರು.
ಇದನ್ನೂ ಓದಿ : ಮಕ್ಕಳಿಗೆ ಪ್ರಿಯವಾದ ಬಾಂಬೆ ಮಿಠಾಯಿ, ಗೋಬಿ ಮಂಚೂರಿ ರಾಜ್ಯದಲ್ಲಿ ನಿಷೇಧ !
ಕನ್ನಡಿಗರು ಪ್ರತಿಷ್ಠೆಯನ್ನು ಬಿಟ್ಟು ಕನ್ನಡಾಭಿಮಾನ ಮೆರೆಯಬೇಕು
ಕನ್ನಡ ಭಾಷೆಗೆ ಆದ್ಯತೆ ನಾಮಫಲಕ ಬರೆಯುವಾಗ ಅಥವಾ ತಯಾರಿಸುವಾಗ ಮೊದಲು ಅಥವಾ ಮೇಲಿನ ಸಾಲನ್ನು ನೆಲದ ಭಾಷೆ ಕನ್ನಡ ಭಾಷೆಯಲ್ಲಿ ಬರೆಯಬೇಕು,ಹಾಗೂ ಶೇ 60 ರಷ್ಟು ಕನ್ನಡ ಭಾಷೆಯಲ್ಲಿರಬೇಕು. ಇದು ಕಡ್ಡಾಯವಾಗಿರಬೇಕು, ನಾಮಫಲಕ ನೋಡಿದ ಸಂದರ್ಭದಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡಿರುವ ಬಗ್ಗೆ ಖಚಿತತೆ ಲಭಿಸಬೇಕು, ಕನ್ನಡಾಭಿಮಾನ ಮೆರೆಯಬೇಕು ಎಂದು ಅಪರ ಜಿಲ್ಲಾಧಿಕಾರಿ ( AC ) ಡಾ.ಹೆಚ್.ಎಲ್ ನಾಗರಾಜು ತಿಳಿಸಿದರು.
ನಾಮಫಲಕಗಳಲ್ಲಿ ಶೇಕಡ 60 ರಷ್ಟು ಸ್ಥಳವನ್ನು ಕನ್ನಡ ಭಾಷೆಗೆ ನೀಡಿದ ನಂತರ ಕೆಳಭಾಗದಲ್ಲಿ ಅಥವಾ ಪಕ್ಕದಲ್ಲಿ ಆಂಗ್ಲ, ಹಿಂದಿ ಬೇರೆ ಭಾಷೆಗಳನ್ನು ಬಳಸಿಕೊಳ್ಳಬಹುದು ಎಂದು ತಿಳಿಸಿದರು.ಮಂಡ್ಯ ಜಿಲ್ಲೆಯ ಸಮಗ್ರ ಮಾಹಿತಿಗಾಗಿ ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ನಮ್ಮ ಜಾಲತಾಣದಲ್ಲಿ ಸರ್ಕಾರದ ಹೊಸ ಯೋಜನೆಗಳು, ಸರ್ಕಾರಿ ನೇಮಕಾತಿಗಳು, ಆರೋಗ್ಯ,ಹಣಕಾಸಿನ ಸಂಬಂಧಿತ, ಚಿನ್ನ, ಷೇರು ಮಾರುಕಟ್ಟೆ ಸುದ್ದಿಗಳು ಹೀಗೆ ಸಾರ್ವಜನಿಕರಿಗೆ ಉಪಯೋಗವಾಗುವ ಎಲ್ಲಾ ಮಾಹಿತಿಯನ್ನು ಒದಗಿಸುತ್ತೇವೆ.✅ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ Updates ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.