ನಮಸ್ತೆ ಬಂಧುಗಳೇ… ಕುರಿ, ಮೇಕೆ ಘಟಕಕ್ಕೆ ಶೇ 90 ರಷ್ಟು ಸಹಾಯಧನ ಪಡೆಯಲು (Sheep and Wool Development Board) ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪ್ರತಿ ವರ್ಷದಂತೆ ಈ ವರ್ಷವು ಕೂಡ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಕುರಿ, ಮೇಕೆ ಸಾಕಾಣಿಕೆ ಮಾಡುವವರಿಗೆ (Kuri sakanike yojane) ಪ್ರೋತ್ಸಾಹವನ್ನು ನೀಡಲು ಅರ್ಹ ಫಲಾನುಭವಿಗಳಿಗೆ ಈ ಯೋಜನೆಯ ಒದಗಿಸಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಉಚಿತ ಮಾಹಿತಿ ಪಡೆದುಕೊಳ್ಳಲು.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ. ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ವರ್ಗಗಳಿಗೆ ಸೇರಿದ ಅರ್ಜಿದಾರರು ಕೊನೆಯ ದಿನಾಂಕ ಮುಗಿಯುದರೊಳಗೆ ಅಗತ್ಯ ದಾಖಲಾತಿಗಳ ಜೊತೆಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಉಪಯೋಗ ಪಡೆದುಕೊಳ್ಳಬಹುದು. ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸುವುದು ಹೇಗೆ? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಕೆಳಕಂಡಂತೆ ವಿವರಿಸಲಾಗಿದೆ.
Sheep and goat farming Subsidy Amount Details- ಎಷ್ಟು ಸಬ್ಸಿಡಿ ನೀಡಲಾಗುತ್ತದೆ!
ಪ್ರಸಕ್ತ 2024-25 ಸಾಲಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ಕಡೆಯಿಂದ ಗಿರಿಜನ ಉಪಯೋಜನೆಯ ಅಡಿಯಲ್ಲಿ ಕುರಿ, ಮೇಕೆ ಘಟಕಕ್ಕೆ ರೂಪಾಯಿ 59,400 ಸಹಾಯಧನ ಪಡೆಯಲು ಅವಕಾಶವಿದೆ.
ಅರ್ಜಿಯನ್ನು ಸಲ್ಲಿಸಲು ಅರ್ಹರು – Who can apply for this scheme:
ಅರ್ಜಿದಾರರು ಕರ್ನಾಟಕದ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ, ಬೆಂಗಳೂರು ಈ ಕಚೇರಿಯಲ್ಲಿ ನೋಂದಾಯಿಸಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರಬೇಕು ಮತ್ತು
ಈ ಹಿಂದಿನ ವರ್ಷಗಳಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಅಥವಾ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಇದೇ ರೀತಿಯ ಉದ್ದೇಶಕ್ಕಾಗಿ ಸಹಾಯಧನ ಸೌಲಭ್ಯ ಪಡೆದಿರಬಾರದು. ಪರಿಶಿಷ್ಟ ಪಂಗಡ /ಜಾತಿ ವರ್ಗದ ಆಸಕ್ತ ಸದಸ್ಯರುಗಳು ಈ ಯೋಜನೆ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು ಕುರಿ ಮತ್ತು ಮೇಕೆ ಸಾಕಾಣಿಕೆಯಲ್ಲಿ ಆಸಕ್ತಿಯನ್ನು ಹೊಂದಿರಬೇಕು.
How to apply-ಅರ್ಜಿಯನ್ನು ಎಲ್ಲಿ ಹೇಗೆ ಸಲ್ಲಿಸಬೇಕು?
ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯತ್ವ ಹೊಂದಿರುವವರು ತಮ್ಮ ವ್ಯಾಪ್ತಿಯಲ್ಲಿ ಬರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು/ಕಾರ್ಯದರ್ಶಿಯವರಿಂದ ಅರ್ಜಿಯನ್ನು ಪಡೆದು, ಭರ್ತಿ ಮಾಡಿ ನಿಮ್ಮ ಜಿಲ್ಲೆಯ ಉಪನಿರ್ದೇಶಕರು, ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಕಚೇರಿಯ ನೇರವಾಗಿ ಭೇಟಿ ಮಾಡಿ ಅರ್ಜಿ ಸಲ್ಲಿಸಬೇಕು.
Required documents for application- ಈ ಯೋಜನೆಗೆ ಅರ್ಜಿ ಸಲ್ಲಿಸಲು ದಾಖಲೆಗಳು:
1) ಅರ್ಜಿ ನಮೂನೆ
2) ಅರ್ಜಿದಾರರ ಆಧಾರ್ ಕಾರ್ಡ
3) ಬ್ಯಾಂಕ್ ಪಾಸ್ ಬುಕ್
4) ಪೋಟೋ
5) ಜಮೀನಿನ ಪಹಣಿ/RTC
For more information- ಈ ಯೋಜನೆಯಡಿ ಸಹಾಯಧನ ಪಡೆಯಲು ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಉಪಯುಕ್ತ ಮಾಹಿತಿ:
ನಿಗಮದ ಅಧಿಕೃತ ವೆಬ್ಸೈಟ್: Click here
ಸಹಾಯವಾಣಿ: 1902
ಜಿಲ್ಲಾವಾರು ಅಧಿಕಾರಿ ಮತ್ತು ಕಚೇರಿಗಳ ವಿವರ: Click here